ಬೆಂಗಳೂರು : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ನಡೆದಿದೆ.ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ವರದಿಯಾಗಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ತಿಳಿದ ತಕ್ಷಣ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಸಂತೋಷ್ ಆರೋಗ್ಯದ ಬಗ್ಗೆ ವೈದ್ಯರಲ್ಲಿ ವಿಚಾರಿಸಿದ್ದು , ಸದ್ಯ ಯಾವುದೇ ಸಮಸ್ಯೆ ಇಲ್ಲ, ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದಿಲ್ಲ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.