ಸುಳ್ಯ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ನೀಡುವ ಗ್ರಂಥಾಲಯ ಸಿಬ್ಬಂದಿ ಸೇವಾ ಪುರಸ್ಕಾರ ಸುಳ್ಯ ತಾಲೂಕಿನ ದೇವಚಳ್ಳ ಗ್ರಂಥಾಲಯದ ಮೇಲ್ವಿಚಾರಕಿ ಸಾವಿತ್ರಿರಾಮ್ ಕಣೆಮರಡ್ಕ ಅವರಿಗೆ ಲಭಿಸಿದೆ.
ಸಾರ್ವಜನಿಕರಲ್ಲಿ ಗ್ರಂಥಾಲಯಗಳ ಬಗ್ಗೆ ಆಸಕ್ತಿ ಬೆಳೆಸುವ, ಮಕ್ಕಳಲ್ಲಿ ಪುಸ್ತಕಗಳ ಬಗ್ಗೆ ಅರಿವು ಮೂಡಿಸುವ ವಿವಿಧ ಕಾರ್ಯಕ್ರಮ ಗಳನ್ನು ಸಾವಿತ್ರಿರಾಮ್ ಆಯೋಜಿಸಿದ್ದರು. ನ.14ರಿಂದ 20ರವರೆಗೆ ನಡೆಯುವ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಿಸಲಾಗುತ್ತಿದ್ದು, ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪುರಸ್ಕಾರ ವಿತರಿಸಿದರು.