ಅರಂತೋಡು: ತಾಲ್ಲೂಕು ಪಂಚಾಯತ್ ಸುಳ್ಯ, ಗ್ರಾಂ ಪಂಚಾಯತ್ ಅರಂತೋಡು, ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಇವುಗಳ ಸಂಯುಕ್ತಾಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು .
ನೆಹರು ಸ್ಮಾರಕ ಪದವಿ ಕಾಲೇಜಿನಿಂದ ಗಾಂಧಿ ನಡಿಗೆಯು ಆರಂಭಗೊಂಡು ತೆಕ್ಕಿಲ್ ಸಮುದಾಯ ಭವನದಲ್ಲಿ ಸಮಾವೇಶಗೊಂಡಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಗ್ರಂಥಾಲಯವನ್ನು ಡಿಜಿಟಲೀಕರಣಗೊಳಿಸಿ ಉನ್ನತೀಕರಿಸಿ ಸಾರ್ವಜನಿಕರಿಗೆ ಸೇವೆಗೆ ಅರ್ಪಿಸಲಾಯಿತು. ನೂರು ಬಚ್ಚಲುಗುಂಡಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ವಿಶೇಷ ಗ್ರಾಮ ಸಭೆಯನ್ನು ನಡೆಸಿ ಗಾಂಧಿಯ ಸ್ಮರಣೆ ಪುಷ್ಪಾರ್ಚನೆ ಮಾಡಿ ಸ್ವಚ್ಚತೆಯ ಕುರಿತು ಕಾರ್ಯಯೋಜನೆ ಹಮ್ಮಿಕೊಳ್ಳಲಾಯಿತು. ಕೇಂದ್ರ ಸರಕಾರದ ಮನೆಮನೆಗೆ ಕುಡಿಯುವ ನೀರನ್ನು ಕಲ್ಪಿಸುವ ಜಲ ಜೀವನ ಮಿಷನ್ ವೈಯಕ್ತಿಕ ನೀರಿನ ನಳ ಸಂಪರ್ಕವನ್ನು ಚಾಲನೆಗೊಳಿಸಲಾಯಿತು. ಈ ಕಾರ್ಯಕ್ರಮದಲ್ಲಿ
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರಿಣಿ ದೇರಾಜೆ , ಕಾಲೇಜಿನ ಪ್ರಾಂಶುಪಾಲರಾದ ರಮೇಶ್, ಕುಡಿಯುವ ನೀರು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆದ ಸುಂದರ್ , ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ವೇತಾ , ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕಿಶೋರ್ ಉಳುವಾರು , ನಿಕಟಪೂರ್ವ ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಪುಷ್ಪಾ ಮೇದಪ್ಪ , ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಮೋಹನ್ ಚಂದ್ರ , ತಾಲ್ಲೂಕು ಉದ್ಯೋಗ ಖಾತ್ರಿ ಯೋಜನೆಯ ಸಂಯೋಜಕಿ ನಮಿತಾ, ತಾಂತ್ರಿಕ ಸಹಾಯಕರಾದ ರಶ್ಮಿ ಊರಿನ ಆಡಳಿತ ಮಂಡಳಿಯ ಸದಸ್ಯರು, ಪ್ರಾಧ್ಯಾಪಕರು, ಸಾರ್ವಜನಿಕ ಮಿತ್ರರು ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಗ್ರಾಮ ಪಂಚಾಯತ ಸಿಬ್ಬಂದಿಗಳು ಮತ್ತು ಸ್ವಚ್ಚತಾ ಕಾರ್ಯಕರ್ತರು ಉಪಸ್ಥಿತರಿದ್ದರು.