ಕಳಂಜ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಇದರ ಆಶ್ರಯದಲ್ಲಿ ನಡೆಯುವ ಅಯ್ಯನಕಟ್ಟೆ ಜಾತ್ರೋತ್ಸವದ ಸಂದರ್ಭದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ಜರಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ

ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ ವಹಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಾ ಸಂಘ ಮಂಗಳೂರು ವಿಭಾಗದ ಸೇವಾ ಪ್ರಮುಖ್ ಸುಭಾಶ್ಚಂದ್ರ ಕಳಂಜ ಶುಭಾಶಂಸನೆ ನೀಡಿದರು. ಅಭ್ಯಾಗತರಾಗಿ ಕೇಂದ್ರ ಅಪರಾಧ ವಿಭಾಗ ಬೆಂಗಳೂರು ಇದರ ಸಹಾಯಕ ಪೋಲೀಸ್ ಆಯುಕ್ತ ಜಗನ್ನಾಥ ರೈ ಬಿ, ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಇದರ ರುವಾರಿ ಭಾಗವತ ಪಟ್ಲ ಸತೀಶ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ.ಜಿ.ಎಸ್.ಎನ್. ಪ್ರಸಾದ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಗದೀಶ್ ಮುಂಡುಗಾರು ಕಾರ್ಯಕ್ರಮ ನಿರೂಪಿಸಿದರು. ಸಮಿತಿಯ ಕಾರ್ಯಾಧ್ಯಕ್ಷ ಶ್ರೀನಾಥ್ ರೈ ದೋಳ್ತೋಡಿ ವಂದಿಸಿದರು.