ಸುಳ್ಯ:ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗು ಸಪರಿವಾರ ದೈವಗಳ ಜಾತ್ರೋತ್ಸವ – ಅಯ್ಯನಕಟ್ಟೆ ಜಾತ್ರೆಯ ಅಂಗವಾಗಿ ಜ.28 ರಂದು ಬೆಳಿಗ್ಗೆ ಶ್ರೀ ಉಳ್ಳಾಕುಲು ದೈವದ
Advertisement
ನೇಮೋತ್ಸವ ನಡೆಯಿತು.ಬೆಳಗಿನ ಜಾವ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು ಕಲ್ಲಮಾಡದಲ್ಲಿ ಉಳ್ಳಾಕುಲು ಶ್ರೀ ಮುಡಿ ದೈವಗಳ ನೇಮೋತ್ಸವ ಜರಗಿತು. ಇಂದು ಸಂಜೆ 6 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಗಾನ ಬಯಲಾಟ ನಡೆಯಲಿದೆ.
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement