ಅಯ್ಯನಕಟ್ಟೆ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ‘ಅಯ್ಯನಕಟ್ಟೆ ಜಾತ್ರೋತ್ಸವ ಸಂಭ್ರಮದಿಂದ ಸಂಪನ್ನಗೊಂಡಿತು. ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮೂರು ದಿನಗಳ ಕಾಲ ನಡೆದ ಅಯ್ಯನಕಟ್ಟೆ ಜಾತ್ರೆಯಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ
ನೇಮೋತ್ಸವ ನಡೆಯುತು. ಇಂದು ಬೆಳಿಗ್ಗೆ ತಂಟೆಪಾಡಿಯಿಂದ ಶಿರಾಡಿ ದೈವದ ಭಂಡಾರ, ಕಳಂಜ ಗುತ್ತಿನಿಂದ ಧೂಮಾವತಿ ದೈವದ ಭಂಡಾರ, ಬಾಳಿಲ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಆಗಮಿಸಿ ಕಲ್ಲಮಾಡದ ಬಳಿ ಶಿರಾಡಿ ,ಧೂಮಾವತಿ ಹಾಗೂ ಕೊಡಮಣಿತ್ತಾಯ ದೈವಗಳ ನೇಮೋತ್ಸವ ನಡೆಯಿತು. ಮಧ್ಯಾಹ್ನದ ಬಳಿಕ ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಲಿ ನೇಮೋತ್ಸವ ನಡೆಯಿತು. ಸಂಜೆ ಮಾರಿ ಹೊರಡುವ ಕಾರ್ಯಕ್ರಮ ನಡೆಯಿತು