ಸುಳ್ಯ: ಕಲ್ಲಪಳ್ಳಿ ದೊಡ್ಡಮನೆಯಲ್ಲಿ ನಿರ್ಮಾಣಗೊಂಡ ದೊಡ್ಡಮನೆ-ದಂದಡ್ಕ ಕಾಂಕ್ರೀಟ್ ರಸ್ತೆಯ ಉದ್ಘಾಟನೆ ಜ.16 ರಂದು ನಡೆಯಿತು. ಪನತ್ತಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಸನ್ನ ಪ್ರಸಾದ್ ಉದ್ಘಾಟಿಸಿದರು. ಪರಪ್ಪ ಬ್ಲಾಕ್ ಪಂಚಾಯತ್ ಸದಸ್ಯ ಅರುಣ್ ರಂಗತ್ತಮಲೆ, ವಾರ್ಡ್ ಸದಸ್ಯ ಹಾಗು ಗ್ರಾಮ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಕಲ್ಲಪಳ್ಳಿ, ಗ್ರಾ.ಪಂ.ಮಾಜಿ ಸದಸ್ಯೆ ನಳಿನಾಕ್ಷಿ ಮತ್ತಿತರರು ಉಪಸ್ಥಿತರಿದ್ದರು. ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ 5 ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement