ಸುಳ್ಯ: ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸುಳ್ಯ ತಾಲೂಕು ಪಂಚಾಯತ್ ವತಿಯಿಂದ ಡಿ. ದೇವರಾಜ ಅರಸು ಭವನ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ಕರುಂಜಿಭಾಗ್ನ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಮೇಲಂತಸ್ತಿನ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭವು
ಜ.21ರಂದು ಬೆಳಿಗ್ಗೆ 10.30ಕ್ಕೆ ಸುಳ್ಯದ ಉಬರಡ್ಕ ಮಿತ್ತೂರಿನ ಕೊಡಿಯಾಲ್ಬೈಲ್ನ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ನ ಶಾಸಕರುಗಳಾದ ಬಿ.ಎಂ. ಫಾರೂಕ್, ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೆ ಗೌಡ, ಪ್ರತಾಪ್ ಸಿಂಹ ನಾಯಕ್.ಕೆ, ಡಾ. ಮಂಜುನಾಥ್ ಭಂಡಾರಿ, ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಉಬರಡ್ಕ ವಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಚಿತ್ರಾಕುಮಾರಿ ಮತ್ತಿತರ ಪ್ರಮುಖರು ಭಾಗವಹಿಸಲಿದ್ದಾರೆ.