ಅರಂತೋಡು: ಕೊಡಗು ಜಿಲ್ಲೆಯ ಸಂಪಾಜೆ, ಚೆಂಬು, ಪೆರಾಜೆ, ದ.ಕ.ಜಿಲ್ಲೆಯ ಸಂಪಾಜೆ, ಅರಂತೋಡು ಗ್ರಾಮಗಳ ವಿದ್ಯುತ್ ಸಮಸ್ಯೆಯನ್ನು ಪರಿಹರಿಸಲು ಮತ್ತು ಉತ್ತಮ ಗುಣಮಟ್ಟದ ವಿದ್ಯುತ್ ನಿರಂತರ ಸರಬರಾಜು ಮಾಡಲು ಕೊಡಗು ಸಂಪಾಜೆ ಗ್ರಾಮದ ಕೊಯನಾಡಿನಲ್ಲಿ ನಿರ್ಮಿಸಲು ಉದ್ಧೇಶಿಸಿರುವ
ವಿದ್ಯುತ್ ಉಪಕೇಂದ್ರವನ್ನು ಕೂಡಲೆ ಮಂಜೂರುಗೊಳಿಸಿ ಅನುಷ್ಠಾನ ಮಾಡಬೇಕೆಂದು ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅಶ್ರಫ್ ಗುಂಡಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಇತ್ತೀಚೆಗೆ ಮನವಿ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ಈ ವಿಷಯದ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ನಿರ್ದೇಶಿಸಿದ್ದರು. ಇದೀಗ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದವರು ಸಂಪಾಜೆ ಗ್ರಾಮದಲ್ಲಿ 2 ಎಕರೆ ಸರಕಾರಿ ಸ್ಥಳವನ್ನು ಗುರುತಿಸಿ ಶೀಘ್ರ ಮಂಜೂರು ಮಾಡಿಕೊಡಲು ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಪತ್ರ ಸಲ್ಲಿಸಿರುತ್ತಾರೆ. ಈ ಪತ್ರದ ಪ್ರತಿ ತನಗೂ ಎಂದು ದೊರೆತಿದೆ ಎಂದು ಅಶ್ರಫ್ ಗುಂಡಿ ತಿಳಿಸಿದ್ದಾರೆ.