ಸುಳ್ಯ:ಕರ್ನಾಟಕ ರಾಜ್ಯ ಮಹಾತ್ಮಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮಂಗಳೂರು ಇದರ ವತಿಯಿಂದ ನರೇಗಾ ದಿವಸ್ ಆಚರಣೆ ಫೆ.2ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದ ಬಳಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸುವರು.ಮುಖ್ಯ ಅತಿಥಿಯಾಗಿ ದ.ಕ. ಜಿ.ಪಂ ನ ಉಪಕಾರ್ಯದರ್ಶಿ ಹಾಗು ನರೇಗಾ
ನೋಡೆಲ್ ಅಧಿಕಾರಿ ಆನಂದ್ ಕುಮಾರ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ನವೀನ್ ಕುಮಾರ್ ಭಂಡಾರಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಜಿ. ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಹಾತ್ಮಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಡೈರಿ ಹಾಗೂ ಕ್ಯಾಲೆಂಡರ್ ಬಿಡುಗಡೆ, ಡಸ್ಟ್ ಬಿನ್ ವಿತರಣೆ, ಕುಮಾಧಾರ ಸ್ನಾನಘಟ್ಟದ ಸ್ವಚ್ಛತಾ ಶ್ರಮದಾನ ನಡೆಯಲಿದೆ. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಐನೆಕಿದು ಗ್ರಾಮದ ಪರಿಶಿಷ್ಟ ಜಾತಿ, ಪಂಗಡದ ಕಾಲೋನಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಮಾಹಿತಿ ಕಾರ್ಯಕ್ರಮ, ಉದ್ಯೋಗ ಚೀಟಿ ವಿತರಣೆ ಹಾಗೂ ಮನೆಮನೆ ಭೇಟಿ ಮಾಡಿ ಸೋಕ್ ಫಿಟ್ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.