ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಹುನಿರೀಕ್ಷಿತ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ರಸಾಯನಿಕ ಹಾಗೂ ಪೆಟ್ರೋಕೆಮಿಕಲ್ಸ್ ಇಲಾಖೆಯು ಅಂತಿಮ ಒಪ್ಪಿಗೆ ನೀಡಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಕೇಂದ್ರದ ಶೇ. 50 ಪಾಲು ಹಣ ಬಿಡುಗಡೆಗೆ ಅಂತಿಮ ಆದೇಶ
Advertisement
ನೀಡಿದೆ. ಕೆ.ಐ.ಎ.ಡಿ.ಬಿ. ಉಳಿಕೆ ಶೇ.50 ಪಾಲು ಹೂಡಿಕೆಯೊಂದಿಗೆ ಈ ಯೋಜನೆಯನ್ನು ಅನುಷ್ಠಾನಗೊಳ್ಳಲಿದೆ. ಈ ಯೋಜನೆಯು ಕನ್ನಡ ಜಿಲ್ಲೆಯ ಗಂಜಿಮಠದ ಬಳಿ ಸುಮಾರು 104 ಎಕರೆ ಕೆ.ಐ.ಎ.ಡಿ.ಬಿ. ಪ್ರದೇಶದಲ್ಲಿ ಪ್ರಾರಂಭಗೊಳ್ಳಲಿದೆ. ಈ ಯೋಜನೆ ದಕ್ಷಿಣ ಕನ್ನಡ ಜಿಲ್ಲೆಗೆ ಬರಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ನಳಿನ್ಕುಮಾರ್ ಕಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement