ಸುಳ್ಯ:ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ನ ೨೦೨೧-೨೨ ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘ, ಎನ್ನೆಸ್ಸೆಸ್ ಹಾಗೂ ಯುವ ರೆಡ್ ಕ್ರಾಸ್ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಅನಿಲ್ಕುಮಾರ್ ನೂತನ ವಿದ್ಯಾರ್ಥಿ
ನಾಯಕರಿಗೆ ಪ್ರಮಾಣ ವಚನ ಬೋಧಿಸಿದರು, ಎನ್ನೆಸ್ಸೆಸ್ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಚಂದ್ರಶೇಖರ ಬಿಳಿನೆಲೆ ಹಾಗೂ ಸುನಿಲ್ಕುಮಾರ್ ಎನ್.ಪಿ. ಎನ್ನೆಸ್ಸೆಸ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ನಾಯಕರಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ್ ಅಧಿಕಾರ ಸ್ವೀಕರಿಸಿ ಎಲ್ಲರ ಸಹಕಾರ ಕೋರಿದರು. ಎನ್ನೆಸ್ಸೆಸ್ ಘಟಕದ ನಾಯಕರಾಗಿ ಅಪೇಕ್ಷ್, ಹಿತೇಶ್, ಶ್ರೀವಿದ್ಯಾ ಹಾಗೂ ಶರಣ್ಯಾ ವಿ.ನಾಯ್ಕ್ ಅಧಿಕಾರ ಸ್ವೀಕರಿಸಿದರು, ಯುವ ರೆಡ್ ಕ್ರಾಸ್ ಘಟಕದ ನಾಯಕರಾಗಿ ರೇವಂತ್ ಹಾಗೂ ಲತಾಶ್ರೀ ಅಧಿಕಾರ ಸ್ವೀಕರಿಸಿದರು. ಸಮಾರಂಭದ ವೇದಿಕೆಯಲ್ಲಿ ಕಾಲೇಜಿನ ಲೆಕ್ಕ ಅಧೀಕ್ಷಕ ಧನಂಜಯ ಕಲ್ಲುಗದ್ದೆ ಹಾಗೂ ವಿದ್ಯಾರ್ಥಿ ಕ್ಷೇಮಾಧಿಕಾರಿ ಹರೀಶ್ ಕುಂಚಡ್ಕ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಶ್ವಿತ್ ಟಿ ಸ್ವಾಗತಿಸಿ ಕಾರ್ಯದರ್ಶಿ ಸುದೀಪ್ ವಂದಿಸಿದರು. ಎನ್ನೆಸ್ಸೆಸ್ ಸ್ವಯಂ ಸೇವಕ ಅಬ್ದುಲ್ ಅಫೀಜ್ ಕಾರ್ಯಕ್ರಮ ನಿರ್ವಹಿಸಿದರು.