ಸುಳ್ಯ:ಎಲ್ಲಾ ರೀತಿಯ ಅಭಿಪ್ರಾಯ ಭೇದ ಮರೆತು ಎಲ್ಲರೂ ಒಟ್ಟಾಗಿ ಪರಸ್ಪರ ವಿಶ್ವಾಸದಿಂದ ಕಾರ್ಯನಿರ್ವಹಿಸಿದಾಗ ಸಮಾಜದ ಏಳಿಗೆ ಸಾಧ್ಯ ಎಂದು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಹೇಳಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಗೆಲುವು ಸಾಧಿಸಿ ಇದೀಗ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಚುನಾಯಿತರಾದ ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾಪ್ರಸಾದ್ ಕೆ.ವಿ.ಅವರಿಗೆ ಅಭಿನಂದನೆ ಹಾಗು ಚುನಾವಣಾ ಗೆಲುವಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸುವ ‘ಸಮರ್ಪಣಾ ಸಮಾವೇಶ ಅಭಿವಂದನೆ’ ಕಾರ್ಯಕ್ರಮವನ್ನು

ಉದ್ಘಾಟಿಸಿ,ಸಮಾರಂಭದ ಅಧ್ಯಕ್ಷತೆ ವಹಿಸಿ, ಸನ್ಮಾನ ನೆರವೇರಿಸಿ ಅವರು ಮಾತನಾಡಿದರು. ಅಮಶ್ರೀಭಾಗ್ನ ಜಾನಕಿ ವೆಂಕಟ್ರಮಣಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರತಿಷ್ಠಿತ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಗೆಲುವು ಸಾಧಿಸಿ ಇದೀಗ ರೇಣುಕಾಪ್ರಸಾದ್ ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ದೊಡ್ಡ ಜವಾಬ್ದಾರಿ ದೊರೆತಿದೆ. ಎಲ್ಲರ ಸಹಕಾರದೊಂದಿಗೆ ಈ ಜವಾಬ್ದಾರಿಯನ್ನು ನಿರ್ವಹಿಸಬೇಕು. ಸಮಾಜದ ಹಿತದೃಷ್ಠಿಯಿಂದ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಎಲ್ಲವನ್ನು ಸವಾಲಾಗಿ ಸ್ವೀಕರಿಸಿ ಗುರಿಮುಟ್ಟುವ ಛಲ ಇರುವ ರೇಣುಕಾಪ್ರಸಾದ್ ಅವರು ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವ ವಿಶ್ವಾಸ ಇದೆ ಎಂದು ಅವರು ಹೇಳಿದರು. ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ಕೆ.ವಿ.ರೇಣುಕಾಪ್ರಸಾದ್ ಮಾತನಾಡಿ ಚುನಾವಣಾ ಗೆಲುವಿಗೆ

ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.ಎಲ್ಲರ ಸಹಕಾರದಿಂದ ಈ ಗೆಲುವು ಸಾಧ್ಯವಾಯಿತು. ಮುಂದೆ ಎಲ್ಲರ ಸಹಕಾರ ಮತ್ತು ಸಲಹೆ ಪಡೆದು ಕಾರ್ಯನಿರ್ವಹಿಸುತ್ತೇನೆ. ಒಕ್ಕಲಿಗರ ಸಂಘದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನೂ ದೊರಕಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಎಸ್.ಎನ್.ಮನ್ಮಥ, ಭರತ್ ಮುಂಡೋಡಿ, ಎಪಿಎಂಸಿ ಮಾಜಿ ಅಧ್ಯಕ್ಷ ಜಾಕೆ ಮಾಧವ ಗೌಡ ವೇದಿಕೆಯಲ್ಲಿ

ಉಪಸ್ಥಿತರಿದ್ದರು. ಸಮಾರಂಭದಲ್ಲಿ ಡಾ.ರೇಣುಕಾಪ್ರಸಾದ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಕೆ.ಜಿ.ಬೋಪಯ್ಯ ಅವರನ್ನು ಹಾಗು ಗೆಲುವಿಗೆ ಸಹಕರಿಸಿದ ಎಲ್ಲರನ್ನೂ ಸನ್ಮಾನಿಸಲಾಯಿತು.ಸಮರ್ಪಣಾ ಸಮಾವೇಶ ಅಭಿವಂದನಾ ಸಮಾರಂಭದ ಸಂಚಾಲಕ ದಿನೇಶ್ ಮಡ್ತಿಲ ಸ್ವಾಗತಿಸಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಭರತ್ ಮುಂಡೋಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಯಶೋಧಾ ರಾಮಚಂದ್ರ ವಂದಿಸಿದರು. ಭವಾನಿಶಂಕರ ಅಡ್ತಲೆ, ಡಾ.ಯಶೋಧಾ ರಾಮಚಂದ್ರ ಹಾಗು ಅನಿಲ್ ಬಿ.ವಿ ಕಾರ್ಯಕ್ರಮ ನಿರೂಪಿಸಿದರು. ಸಮರ್ಪಣಾ ಸಮಾವೇಶ ಅಭಿವಂದನಾ ಸಮಿತಿಯ ಡಾ.ಉಜ್ವಲ್ ಯು.ಜೆ, ಡಾ.ಮನೋಜ್, ಡಾ.ಎನ್.ಎ.ಜ್ಞಾನೇಶ್, ಬಿ.ಟಿ.ಮಾಧವ, ಶಿವರಾಮ ಕೇರ್ಪಳ,ಪ್ರಸನ್ನ ಕಲ್ಲಾಜೆ,ಆನಂದ ಖಂಡಿಗ, ನಾಗೇಶ್ ಕೊಚ್ಚಿ ಮತ್ತಿತರರು ಸಹಕರಿಸಿದರು.
