ಸುಳ್ಯ: ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ 73ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
ಸಂಸ್ಥೆಯ ನಿರ್ದೇಶಕ ಡಾ. ವಿದ್ಯಾಶಾಂಭವ ಪಾರೆ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಶಿಕ್ಷಕಿ ಶ್ರೀದೇವಿ ಪಿ. ಎಸ್ ಭಾಗವಹಿಸಿದ್ದರು ಶಾಲೆಯ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ದಾಮ್ಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ಶ್ರವಣ್ ಕೆ, ಗಗನ್ ಎ. ವಿ ಸಂವಿಧಾನದ ಕುರಿತಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಭಾಕಾರ್ಯಕ್ರಮದ ಬಳಿಕ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಧ್ವಜ ದೇಶಭಕ್ತಿಗೀತೆ ಗಾಯನ ನಡೆಯಿತು.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement