ಬೆಂಗಳೂರು: ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ರದ್ದು ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಆಸ್ಪತ್ರೆಗೆ ದಾಖಲಾಗುವ ಕೋವಿಡ್ ಸೋಂಕಿತರ ಸಂಖ್ಯೆ ಶೇಕಡ 5ರಷ್ಟಿದೆ. ಹಾಗಾಗಿ, ವೀಕೆಂಡ್ ಕರ್ಫ್ಯೂ ಹಿಂಪಡೆಯುತ್ತಿದ್ದೇವೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾದರೆ ಮುಂದಿನ ಕ್ರಮ ಎಂದು ಅಶೋಕ್ ಹೇಳಿದರು.
ಇದೇವೇಳೆ, ನೈಟ್ ಕರ್ಫ್ಯೂ ಎಂದಿನಂತೆ ಮುಂದುವರಿಯಲಿದೆ ಎಂದು ಅವರು ಹೇಳಿದರು
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement