ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಉನ್ನತಮಟ್ಟದ ಸಭೆ ನಡೆಯಲಿದ್ದು,ವಾರಾಂತ್ಯದ ಕರ್ಫ್ಯೂ ಮತ್ತು ರಾತ್ರಿ ಕರ್ಫ್ಯೂವಿನಂತಹ ನಿರ್ಬಂಧಗಳ ಸಡಿಲಿಕೆ ಕುರಿತು ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ.ಈ ಕುರಿತು ಶುಕ್ರವಾರದ ಸಭೆಯಲ್ಲಿ ಪುನರ್ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದರು. ಕೋವಿಡ್ ನಿಯಂತ್ರಣ ಕುರಿತು ಶುಕ್ರವಾರ ಉನ್ನತಮಟ್ಟದ ಸಭೆ ನಡೆಯಲಿದೆ. ಆಗ ತಜ್ಞರು ಸ್ಪಷ್ಟ ಚಿತ್ರಣ ನೀಡಲಿದ್ದಾರೆ. ಬಳಿಕ ಮಾರ್ಗಸೂಚಿ ಪರಿಷ್ಕರಣೆ ಕುರಿತು ನಿರ್ಧಾರ ಮಾಡಲಾಗುವುದು. ತಜ್ಞರ ಸಲಹೆಗಳನ್ನು ಆಧರಿಸಿ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement