ಬೆಂಗಳೂರು: ಸುಳ್ಯದ 110 ಕೆವಿ ಸಬ್ಸ್ಟೇಷನ್ ನಿರ್ಮಾಣ ಕುರಿತಂತೆ ಇರತಕ್ಕಂತಹ ಅಡ್ಡಿಗಳ ನಿವಾರಣೆಗಾಗಿ ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅರಣ್ಯ ಇಲಾಖೆಯ ಕಡೆಯಿಂದ ಇರುವಂತಹ ಅಡ್ಡಿ-ಆತಂಕಗಳನ್ನು ನಿವಾರಿಸುವ ತುರ್ತು

ಕ್ರಮ ಕೈಗೊಳ್ಳಲು ಸೂಚನೆ ನೀಡಿದರು. ಜಿಲ್ಲೆಯ ಕೆಪಿಟಿಸಿಎಲ್ ಇಂಜಿನಿಯರ್ ಹಾಗೂ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ, ರಾಜ್ಯದ ಕೆಪಿಟಿಸಿಎಲ್ ಎಂಡಿ ಹಾಗೂ ಅರಣ್ಯ ಮುಖ್ಯ ಸಂರಕ್ಷಣಾಧಿಕಾರಿ, ಇಲಾಖಾ ಮಟ್ಟದಲ ಅರಣ್ಯ ಹಾಗೂ ಇಂಧನ ಇಲಾಖೆ ಯ ಕಾರ್ಯದರ್ಶಿಗಳನ್ನೊಳಗೊಂಡ ಸಮನ್ವಯ ಸಮಿತಿಯನ್ನು ರಚಿಸಿ ಯೋಜನೆ ಜಾರಿಗೆ ಸಂಬಂಧಿಸಿದ ಎಲ್ಲಾ ಅಡೆತಡೆಗಳನ್ನು ನಿವಾರಿಸಲು ಕೂಡಲೇ ಕ್ರಮ ಕೈಗೊಳ್ಳಲು ಸ್ಪಷ್ಟ ಸೂಚನೆ ನೀಡಿದರು. ಸುಳ್ಯದ ಶಾಸಕ ಹಾಗೂ ಸಚಿವರಾದ ಎಸ್ ಅಂಗಾರ ಅರಣ್ಯ ಇಲಾಖೆಯ ಸಚಿವರಾದ ಉಮೇಶ್ ಕತ್ತಿ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್, ಯುವಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ಸುನಿಲ್ ಕೆರ್ಪಳ, ಜಗದೀಶ್ ಸರಲಿಕುಂಜ ಉಪಸ್ಥಿತರಿದ್ದರು ಎಂದು ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.