ಸುಳ್ಯ:ಅಗಲಿದ ಬಿಜೆಪಿ ಹಿರಿಯ ಮುಖಂಡ ಉಮೇಶ್ ವಾಗ್ಲೆ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ ಫೆ.5 ರಂದು ಪೂ.10.30 ಕ್ಕೆ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರ ಕೇರ್ಪಳದಲ್ಲಿ ನಡೆಯಲಿದೆ. ಬಿಜೆಪಿ
ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ , ಸಚಿವರಾದ ಎಸ್. ಅಂಗಾರ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ವಿಧಾನ ಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಘ ಚಾಲಕರಾದ ಚಂದ್ರಶೇಖರ ತಳೂರು, ಕಾಂಗ್ರೆಸ್ ಮುಖಂಡ, ಎನ್ . ಜಯಪ್ರಕಾಶ್ ರೈ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ, ಎಂ.ಬಿ. ಸದಾಶಿವ, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ , ದುರ್ಗಾಪರಮೇಶ್ವರಿ ಕಲಾ ಮಂದಿರದ ಅಧ್ಯಕ್ಷ ಗೋಪಾಲಕೃಷ್ಣ ಕೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.