ಗೂನಡ್ಕ:ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೂನಡ್ಕದ ದರ್ಖಾಸ್ತು ಹಿಲ್ ರಸ್ತೆ ಅಭಿವೃದ್ಧಿಗೆ ಫೆ.7ರಂದು ಶಿಲಾನ್ಯಾಸ ನೆರವೇರಿಸಲಾಯಿತು. ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ಅವರ ಪ್ರಯತ್ನದ ಫಲವಾಗಿ ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರು ರಸ್ತೆಯ ಕಾಂಕ್ರೀಟೀಕರಣಕ್ಕೆ


5 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದ್ದರು. ಸಂಪಾಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗು ಗ್ರಾಮ ಪಂಚಾಯತ್ ಸದಸ್ಯ ಸೋಮಶೇಖರ ಕೊಯಿಂಗಾಜೆ ತೆಂಗಿನ ಕಾಯಿ ಒಡೆಯುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಕೆಪಿಸಿಸಿ ಮಾಜಿ ಕಾರ್ಯದರ್ಶಿ ಹಾಗು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ಹಾಗು ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ ಅವರು ಶಿಲನ್ಯಾಸ ನೆರವೇರಿಸಿದರು.
‘ಗ್ರಾಮ ಪಂಚಾಯತ್ ಅಥವಾ ಸರಕಾರ ರಸ್ತೆ ನಿರ್ಮಾಣ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರು ಪೂರ್ಣ ಸಹಕಾರ ನೀಡಬೇಕು ಮತ್ತು ರಸ್ತೆಯನ್ನು ಸಂರಕ್ಷಿಸಬೇಕು ಎಂದು ಹೇಳಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ ಮಾತನಾಡಿ ಅಭಿವೃದ್ಧಿ ಮಾಡುವ ಆಸಕ್ತಿ ಇರುವ ಪಂಚಾಯತ್ಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಇಲಾಖೆಯ ಅಧಿಕಾರಿಗಳು ಪೂರ್ಣ ಸಹಕಾರ ನೀಡುತ್ತದೆ. ಅಭಿವೃದ್ಧಿ ನಿಟ್ಟಿನಲ್ಲಿ ಸಂಪಾಜೆ ಮಾದರಿಯಾಗಿದೆ ಎಂದು ಹೇಳಿದರು. ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ಮಾತನಾಡಿ ಸಂಪಾಜೆ ಗ್ರಾಮದ ವಿವಿಧ ರಸ್ತೆ, ಸೇತುವೆಗಳ ನಿರ್ಮಾಣಕ್ಕೆ ಅನುದಾನ ತರಲು ಸಾಧ್ಯವಾಗಿದೆ. ಗ್ರಾಮದ ಅಭಿವೃದ್ಧಿಗೆ ಮುಂದೆಯೂ ಪೂರ್ಣ
ಸಹಕಾರ ನೀಡಲಾಗುವುದು ಎಂದು ಹೇಳಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಲಿಸ್ಸಿ ಮೊನಾಲಿಸಾ, ಸದಸ್ಯರಾದ ಪಿ.ಕೆ.ಅಬುಸಾಲಿ, ಶೌವಾದ್ ಗೂನಡ್ಕ, ಜಗದೀಶ್ ರೈ, ಸುಂದರಿ ಮುಂಢ್ಜ , ವಿಮಲಾ ಪ್ರಸಾದ್, ಎಸ್.ಕೆ.ಹನೀಫ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ, ಮಾಜಿ ಅಧ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ, ಮಾಜಿ ಉಪಾಧ್ಯಕ್ಷೆ ಆಶಾ ವಿನಯಕುಮಾರ್, ಗುತ್ತಿಗೆದಾರರಾದ ರಹೀಂ ಬೀಜದಕಟ್ಟೆ, ಪಿ.ಕೆ.ಉಮ್ಮರ್ ಹಾಜಿ, ಮುಜಾಫರ್, ಬಾಲಚಂದ್ರ ನರಂದಗುಳಿ, ಅಬ್ದುಲ್ಲಾ ಚೇರೂರ್ ಮತ್ತಿತರರು ಉಪಸ್ಥಿತರಿದ್ದರು.