ಮುಂಬೈ: ಖ್ಯಾತ ಗಾಯಕಿ, ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್ (92) ಅವರು ನಿಧನರಾಗಿದ್ದಾರೆ.ಕಳೆದೊಂದು ತಿಂಗಳಿನಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿರುವ ಲತಾ, ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು.2019ರಲ್ಲಿ ಉಸಿರಾಟದ ತೊಂದರೆ

ಯಿಂದಾಗಿ ಲತಾ ಮಂಗೇಶ್ಕರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚೇತರಿಸಿಕೊಂಡಿದ್ದರು. ಆದರೆ ಇದೀಗ ಲತಾ ಮಂಗೇಶ್ಕರ್ ಅವರಿಗೆ ಕರೊನಾ ಸೋಂಕು ತಗುಲಿದ್ದು, ಐಸಿಯುವಿನಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಲತಾ ಮಂಗೇಶ್ಕರ್ 29 ಸೆಪ್ಟಂಬರ್ 1929ರಲ್ಲಿ ಮಧ್ಯಪ್ರದೇಶದ ಇಂದೋರ್ ನಲ್ಲಿ ಜನಿಸಿದ್ದರು.1942 ರಲ್ಲಿ 13 ನೇ ವಯಸ್ಸಿನಲ್ಲಿ ಗಾಯನವನ್ನು ಆರಂಭಿಸಿ 7 ದಶಕಗಳ ಕಾಲ ಸಂಗೀತ ಲೋಕದ ಗಾನಕೋಗಿಲೆಯಾಗಿ ವಿಶ್ವಖ್ಯಾತಿ ಗಳಿಸಿರುವ ಗಾಯಕಿ ಲತಾ. 36 ಭಾರತೀಯ ಭಾಷೆಗಳಲ್ಲಿ 30 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ತನ್ನ ಏಳು ದಶಕಗಳ ಸುದೀರ್ಘ ವೃತ್ತಿಜೀವನದಲ್ಲಿ ಹಲವು ಖ್ಯಾತ ಗೀತೆಗಳನ್ನು ಹಾಡಿದ್ದರು. ಅವರಿಗೆ ಭಾರತರತ್ನ, ಪದ್ಮವಿಭೂಷಣ, ಪದ್ಮಭೂಷಣ ಹಾಗೂ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ,
ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು, 15 ಬಂಗಾಳ ನಾಲ್ಕು ಫಿಲ್ಮ್ಫೇರ್ ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು, ಎರಡು ಫಿಲ್ಮ್ಫೇರ್ ವಿಶೇಷ ಪ್ರಶಸ್ತಿಗಳು, ಫಿಲ್ಮ್ಫೇರ್ ಜೀವಮಾನ ಸಾಧನೆ ಪ್ರಶಸ್ತಿ ಮತ್ತು ಅನೇಕ ಪುರಸ್ಕಾರಗಳನ್ನು ಗಳಿಸಿದ್ದಾರೆ.