ಮಂಗಳೂರು: ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಹಾಗೂ ದಕ್ಷಿಣ ಕನ್ನ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನೀಲ್ ಕುಮಾರ್ ಅವರ ಕಚೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಾರ್ಯಾರಂಭಗೊಂಡಿತು. ಲೋಕಸಭಾ ಸದಸ್ಯರಾದ ನಳಿನ್ಕುಮಾರ್ ಕಟೀಲ್ ಉದ್ಘಾಟಿಸಿದರು. ಸಚಿವ ವಿ.ಸುನಿಲ್ ಕುಮಾರ್, ಶಾಸಕರಾದ ವೈ.ಭರತ್ ಶೆಟ್ಟಿ,ರಾಜೇಶ್ ನಾಯಕ್, ವೇದವ್ಯಾಸ್ ಕಾಮತ್,ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದ್ರೆ, ಹರಿಕೃಷ್ಣ ಬಂಟ್ವಾಳಗ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement