ಸುಳ್ಯ:ಕರ್ನಾಟಕ ರಾಜ್ಯ ಮಹಾತ್ಮಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮಂಗಳೂರು ಇದರ ವತಿಯಿಂದ ನರೇಗಾ ದಿವಸ್ ಆಚರಣೆ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದ ಬಳಿ ಫೆ.2 ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಕಾರ್ಯಕ್ರಮವನ್ನು
ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ದ.ಕ. ಜಿ.ಪಂನ ಉಪಕಾರ್ಯದರ್ಶಿ ಹಾಗೂ ನರೇಗಾ ನೋಡೆಲ್ ಅಧಿಕಾರಿ ಆನಂದ್ ಕುಮಾರ್, ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ್, ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ, ಮಂಗಳೂರು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ನಾಗರಾಜ್,ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ, ಕ ಜಿಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ನಾಗೇಶ್, ಪುತ್ತೂರು ತಾಲೂಕು ನರೇಗಾ ಸಹಾಯಕ ನಿರ್ದೇಶಕಿ ಶೈಲಜಾ ಭಟ್, ಸುಬ್ರಹ್ಮಣ್ಯ ಗ್ರಾಪಂ ಅಧ್ಯಕ್ಷೆ ಲಲಿತಾ ಗುಂಡಡ್ಕ, ಉಪಾಧ್ಯಕ್ಷೆ ಸವಿತಾ ಭಟ್, ಪಿಡಿಒ ಯು.ಡಿ.ಶೇಖರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹಾತ್ಮಾ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಕಿಶನ್ ಸ್ವಾಗತಿಸಿದರು. ಖಜಾಂಜಿ ವಿನೋದ್ ವಂದಿಸಿದರು. ಸುನಿತಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಹಾತ್ಮಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ
ಸಂಘದ ಡೈರಿ ಹಾಗೂ ಕ್ಯಾಲೆಂಡರ್ ಬಿಡುಗಡೆಸಲಾಯಿತು. ಉದ್ಯೋಗ ಖಾತರಿ ಯೋಜನೆಯಲ್ಲಿ 100 ದಿನ ಪೂರೈಸಿದವರನ್ನು ಸನ್ಮಾನಿಸಿ ಗೌರವಿಸಲಾಯಿತು. ಹೊಸ ಉದ್ಯೋಗ ಚೀಟಿ ವಿತರಿಸಲಾಯಿತು.
ಬಳಿಕ ಕುಮಾರಧಾರ ಸ್ನಾನಘಟ್ಟದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಬಳಿಕ ಏನೆಕಲ್ಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಮಾಹಿತಿ ಕಾರ್ಯಾಗಾರ ನಡೆಯಿತು. ಉದ್ಯೋಗ ಚೀಟಿ ವಿತರಣೆ ಹಾಗೂ ಮನೆಮನೆ ಭೇಟಿ ಮಾಡಿ ಸೋಕ್ ಫಿಟ್ ಬಗ್ಗೆ ಜಾಗೃತಿ ಹಾಗು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಸಲಾಯಿತು.